×
Ad

'ಗೆಲುವನ್ನು ಸಂಭ್ರಮಿಸುವುದಕ್ಕೂ ಡಿಕೆಶಿಗೆ ಸಾಧ್ಯವಾಗುತ್ತಿಲ್ಲವೇ?': ಬಿಜೆಪಿ

Update: 2021-11-02 17:15 IST

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಫಲಿತಾಂಶದ ಕುರಿತು ರಾಜಕೀಯ ನಾಯಕರು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದು, ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ನಲ್ಲಿ ಮಹಾ ಸ್ಫೋಟಕ್ಕೆ ಕಾರಣವಾಗಲಿದೆ ಎಂದು ಬಿಜೆಪಿ ಟೀಕಿಸಿದೆ.

ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ' ಸಿದ್ದರಾಮಯ್ಯ ಅವರ ಬಣ ನೀಡುತ್ತಿರುವ ಒಳ ಏಟಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತತ್ತರಿಸಿ ಹೋಗಿದ್ದಾರೆ. ಉಪಚುನಾವಣೆ ಫಲಿತಾಂಶದ ದಿನವೇ ಡಿಕೆಶಿ ಅವರು ವಿಷಾದದ ಮಾತುಗಳನ್ನಾಡಿದ್ದಾರೆ. ಗೆಲುವನ್ನು ಸಂಭ್ರಮಿಸುವುದಕ್ಕೂ ಕೆಪಿಸಿಸಿ ಅಧ್ಯಕ್ಷರಿಗೆ ಸಾಧ್ಯವಾಗುತ್ತಿಲ್ಲವೇ?' ಎಂದು ಬಿಜೆಪಿ ಪ್ರಶ್ನಿಸಿದೆ. 

'ಒಂದು ಹುದ್ದೆಗೆ ಮೂರ್ನಾಲ್ಕು ಆಕಾಂಕ್ಷಿಗಳು, ಚೇರ್ ಖಾಲಿ ಮಾಡಿಸಲು ಪ್ರಯತ್ನ ಮಾಡುತ್ತಾರೆ, ಮ್ಯೂಸಿಕಲ್ ಚೇರ್‌ನಲ್ಲಿ ಸಿಲುಕಿಕೊಂಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸುತ್ತಿರುವುದೇಕೆ? ಹಾನಗಲ್ ಫಲಿತಾಂಶದ ಕ್ರೆಡಿಟ್‌ಗಾಗಿಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ತೀವ್ರಗೊಂಡಿದೆ' ಎಂದು ಬಿಜೆಪಿ ಟೀಕಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News