ಬಿಟ್‍ಕಾಯಿನ್ ಪ್ರಕರಣ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

Update: 2021-11-02 11:58 GMT

ಬೆಂಗಳೂರು, ನ.2: ಬಿಟ್‍ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. 

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಾರು ಭಾಗಿಯಾಗಿದ್ದಾರೆಂದು ಸ್ಪಷ್ಟವಾಗಿ ಹೇಳಬೇಕು. ಸುಮ್ಮನೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಮಾದಕ ವಸ್ತು ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನನ್ನು ಬಂಧಿಸಿ ತನಿಖೆ ನಡೆಸಿದಾಗ ಬಿಟ್‍ಕಾಯಿನ್ ಪ್ರಕರಣದಲ್ಲೂ ಈತ ಭಾಗಿಯಾಗಿರುವುದು ಗೊತ್ತಾಗಿ ಇಡಿ ಇನ್ನಿತರೆ ತನಿಖಾ ಸಂಸ್ಥೆಗಳಿಗೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡುವ ಕೆಲಸ ಮಾಡಿಲ್ಲ ಎಂದರು.

ಬಿಟ್‍ಕಾಯಿನ್ ಆರೋಪಿ ಜತೆಗೆ ಬಿಜೆಪಿ ನಾಯಕರು ಸಂಪರ್ಕದಲ್ಲಿಲ್ಲ. ಆತನ ಸಂಪರ್ಕದಲ್ಲಿ ಕಾಂಗ್ರೆಸ್‍ನಲ್ಲೇ ಇರಬಹುದು. ಇದನ್ನು ಕಾಂಗ್ರೆಸ್ ನಾಯಕರೇ ಹೇಳಲಿ ಎಂದು ಸವಾಲು ಹಾಕಿದರು.

ಸಾರ್ವಜನಿಕರಿಗೆ ಅವಕಾಶ: ನಟ ಪುನೀತ್ ರಾಜ್‍ಕುಮಾರ್ ಅವರ ಸಮಾಧಿ ಬಳಿ ಕುಟುಂಬದವರು ಹಾಲು-ತುಪ್ಪದ ಕಾರ್ಯ ನೆರವೇರಿಸಿದ್ದಾರೆ. ಇವರ ಕುಟುಂಬದ ಕೈಂಕರ್ಯಗಳು ಮುಗಿದ ನಂತರ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News