×
Ad

ಹೃದಯಾಘಾತ: ಕಾಲೇಜಿನಲ್ಲೇ ಕುಸಿದು ಬಿದ್ದು ಪಿಯುಸಿ ವಿದ್ಯಾರ್ಥಿ ಮೃತ್ಯು

Update: 2021-11-02 17:53 IST

ಚಿತ್ರದುರ್ಗ: ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 

ಚಿತ್ರದುರ್ಗ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಕಾಶ್ (17)ಮೃತ ವಿದ್ಯಾರ್ಥಿಯಾಗಿದ್ದು, ಬೆಳಿಗ್ಗೆ ಕಾಲೇಜಿಗೆ ತೆರಳಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾನೆ. 

ವಿಷಯ ತಿಳಿದ ಕಾಲೇಜು ಸಿಬ್ಬಂದಿ, ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗ ಮಧ್ಯೆ ವಿದ್ಯಾರ್ಥಿ ಪ್ರಕಾಶ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News