ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
Update: 2021-11-02 18:23 IST
ಬೆಂಗಳೂರು, ನ.2: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.6ರವರೆಗೆ ಸಿಡಿಲು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನ.3ರಿಂದ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಮುಂದುವರಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.3ರಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನ.6ರಿಂದ ಮಳೆ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.