ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮಕ್ಕೆ ಚಾಲನೆ

Update: 2021-11-02 13:42 GMT

ಶಿರ್ವ, ನ.2: ಬೆಳ್ಳೆ ಗ್ರಾಮ ಪಂಚಾಯತ್, ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಲಯನ್ಸ್ ಕ್ಲಬ್ ಇವುಗಳ ಸಹಭಾಗಿತ್ವದಲ್ಲಿ ದೀಪಾವಳಿ ಸಂಭ್ರಮ ಹಾಗೂ ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮವನ್ನು ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಚಾಲನೆ ನೀಡಿದರು. ಸಂತ ಲಾರೆನ್ಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ.ಜೋರ್ಜ್ ಡಿಸೋಜ ಆಶೀರ್ವಚನ ನೀಡಿದರು. ಸಹಾಯಕ ಧರ್ಮಗುರು ರೆ.ಫಾ.ಸಿರಿಲ್ ಲೋಬೊ, ಕಾಪು ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿದರು.

ಗ್ರಾಪಂ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಗೂಡುದೀಪ ಸ್ಪರ್ಧಾ ವಿಜೇತರಿಗೆ ಲಯನ್ಸ್ ಉಪಾಧ್ಯಕ್ಷ ರಾಜೇಂದ್ರ ಶೆಟ್ಟಿ ಬಹುಮಾನ ವಿತರಿಸಿದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಕೆ.ಶೆಟ್ಟಿ, ಶಿರ್ವ ಆರಕ್ಷಕ ಠಾಣಾಧಿಕಾರಿ ಶ್ರೀಶೈಲ ಮುರ ಗೋಡು, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಪೆರ್ನಾಂಡಿಸ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಎಡ್ವರ್ಡ್ ಲಾರ್ಸನ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಬಾ ಸ್ವಾಗತಿಸಿದರು. ಉಪನ್ಯಾಸಕಿ ಸುಧಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯಶಿಕ ್ಷಕಿ ಸುನೀತಾ ಕಾಮತ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News