×
Ad

ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಜಾಮೀನು

Update: 2021-11-02 20:04 IST

ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ ಕುಂಞಿ (65) ಜಾಮೀನು ಪಡೆದುಕೊಂಡ ಆರೋಪಿ.

ಈತ ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದೀಗ ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಆರೋಪಿ ಪರ ವಕೀಲರಾದ ಅಶ್ರಫ್ ಅಗ್ನಾಡಿ ಮತ್ತು ಮಜೀದ್ ಖಾನ್ ವಾದಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News