×
Ad

ಉಡುಪಿ: ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆ

Update: 2021-11-02 22:29 IST

ಉಡುಪಿ, ನ.2: ಜಿಲ್ಲೆಯ ಯುವಕರ ಪ್ರತಿಭೆಯನ್ನು ಪ್ರದರ್ಶಿಸಲು, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿದೆ.

ಬಹುಮಾನಗಳ ವಿವರ: ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು.

ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ ಒಂದು ಲಕ್ಷ ರೂ. ಹಾಗೂ ತೃತೀಯ ಬಹುಮಾನ 50,000 ರೂ. ನೀಡಲಾಗುವುದು.

ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ ಒಂದು ಲಕ್ಷ ರೂ. ಹಾಗೂ ತೃತೀಯ ಬಹುಮಾನ 50,000 ರೂ. ನೀಡಲಾಗುವುದು. ಭಾಷಣದ ವಿಷಯ: ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ- ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್. ಭಾಷಣ ಸ್ಪರ್ಧೆಗೆ 9-10 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶವಿರುತ್ತದೆ.

ವಿವರ: ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ಕುಂದಾಪುರ, ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ನವೆಂಬರ್ 25ರಂದು ಬೆಳಗ್ಗೆ 10:30ಕ್ಕೆ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್ನೆಸ್ಸೆಸ್ ಅಧಿಕಾರಿ ಅರುಣ್‌ಕುಮಾರ್ (ಮೊಬೈಲ್:9480396456/9972404202) ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ನವೆಂಬರ್ 26ರಂದು ಬೆಳಗ್ಗೆ 11:00ಕ್ಕೆ ಎಂ.ಜಿ.ಎಂ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್ನೆಸ್ಸೆಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಮೊಬೈಲ್ ನಂ: 8884323443 / 9739430331 ಹಾಗೂ ಕಾರ್ಕಳ, ಹೆಬ್ರಿ ತಾಲೂಕುಗಳಿಗೆ ಸಂಬಂಧಿಸಿದಂತೆ ನವೆಂಬರ್ 27ರಂದು ಬೆಳಗ್ಗೆ 11:00ಕ್ಕೆ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್ನೆಸ್ಸೆಸ್ ಅಧಿಕಾರಿ ಸುಚಿತ್ರಾ ಮೊಬೈಲ್: 8197488357ನ್ನು ಸಂಪರ್ಕಿಸಬಹುದಾಗಿದೆ.

ಭಾಷಣ ಸ್ಪರ್ಧೆಯಲ್ಲಿ 18ರಿಂದ 29 ವರ್ಷದೊಳಗಿನ ಯುವಜನರು ಭಾಗವಹಿಸಬಹುದಾಗಿದೆ. ಭಾಗವಹಿಸುವವರು ಕಡ್ಡಾಯವಾಗಿ ಉಡುಪಿ ಜಿಲ್ಲೆಯ ನಿವಾಸಿಯಾಗಿರಬೇಕು. ಸ್ಪರ್ಧಾಳು ತಮ್ಮ ಒಂದು ಪಾಸ್‌ಪೋರ್ಟ್ ಸೈಜ್ ಪೋಟೊ, ಆಧಾರ್ ಕಾರ್ಡ್ (ಕಡ್ಡಾಯವಾಗಿ) ಪ್ರತಿ, ಪಾನ್‌ಕಾರ್ಡ್/ ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿಂದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ ತಪಾಸಣೆಗಾಗಿ ಅಗತ್ಯವಾಗಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ: 0820-2574992 ಅಥವಾ ಇ-ಮೇಲ್-dyc.udupi@gmail.com - ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್‌ಫ್ರೆ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News