×
Ad

ವಿಶುಕುಮಾರ್ ಪ್ರಶಸ್ತಿಗೆ ಡಾ.ತುಕಾರಾಮ್ ಪೂಜಾರಿ ಆಯ್ಕೆ

Update: 2021-11-03 17:09 IST
ಡಾ.ತುಕಾರಾಮ್ ಪೂಜಾರಿ

ಮಂಗಳೂರು, ನ.3: ಯುವವಾಹಿನಿ ಕೇಂದ್ರ ಸಮಿತಿ ವತಿಯಿಂದ ಪ್ರತಿ ವರ್ಷ ವತಿಯಿಂದ ಕಥೆ, ಕಾದಂಬರಿಕಾರ, ನಟ-ನಿರ್ದೇಶಕ ದಿ.ವಿಶುಕುಮಾರ್ ಅವರ ಗೌರವಾರ್ಥ ನೀಡುವ ವಿಶುಕುಮಾರ್ ಪ್ರಶಸ್ತಿಗೆ ಇತಿಹಾಸ ಮತ್ತು ಜಾನಪದ ಸಂಶೋಧಕ ಡಾ.ತುಕಾರಾಮ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಯುವವಾಹಿನಿ ಕೊಲ್ಯ ಘಟಕ ಆಶ್ರಯದಲ್ಲಿ ನ.7ರಂದು ಬೆಳಗ್ಗೆ 10 ಗಂಟೆಗೆ ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಇದೇ ವೇಳೆ ಯುವ ಸಾಹಿತಿಗಳನ್ನು ಪ್ರೋತ್ಸಾಹಿಸಬೇಕು ಎನ್ನುವ ನಿಟ್ಟಿನಲ್ಲಿ ನೀಡಲಾಗುವ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಇಂದು ಚೇತನ ಬೋರುಗುಡ್ಡೆ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕ ಶಶಿಧರ ಕಿನ್ನಿಮಜಲು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಸಮಾರಂಭವನ್ನು ಕೊಲ್ಯ ಸೋಮೇಶ್ವರ ಬಿಲ್ಲವ ಸೇವಾಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ ಕೊಲ್ಯ ಉದ್ಘಾಟಿಸಲಿದ್ದು, ಶಾಸಕ ಯು.ಟಿ.ಖಾದರ್, ತುಳುಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಣ ತಜ್ಞ ಮಹಾಬಲೇಶ್ವರ ಟಿ.ಹೆಬ್ಬಾರ್ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದವರು ವಿವರಿಸಿದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಕೊಲ್ಯ ಘಟಕ ಅಧ್ಯಕ್ಷ ಮೋಹನ್ ಮಾಡೂರು, ಪ್ರಮುಖರಾದ ಶಂಕರ ಸುವರ್ಣ, ಮುದ್ದುಮೂಡುಬೆಳ್ಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News