×
Ad

ರಾಜ್ಯ ಹೈಕೋರ್ಟ್‍ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

Update: 2021-11-03 18:28 IST

ಬೆಂಗಳೂರು, ನ.3: ಕರ್ನಾಟಕ ಹೈಕೋರ್ಟ್‍ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಸರಕಾರ ಬುಧವಾರ ಆದೇಶ ಹೊರಡಿಸಿದೆ. 

ವಕೀಲರಾದ ಅನಂತ್ ರಾಮನಾಥ್ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್‍ಕುಳೈಲ್ ಶ್ರೀಧರನ್ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಸುಪ್ರೀಂಕೋರ್ಟ್ ಕೊಲಿಜಿಯಂ ಅ.6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‍ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News