×
Ad

ರಾಜ್ಯದಲ್ಲಿ ಪೆಟ್ರೋಲ್ ಬೆಲೆ 95.50, ಡೀಸೆಲ್ 81.50 ರೂ. ಆಗುವ ನೀರಿಕ್ಷೆ: ಸಿಎಂ ಬೊಮ್ಮಾಯಿ

Update: 2021-11-03 23:20 IST

ಬೆಂಗಳೂರು: ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು, ಈ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 7 ರೂ. ಸುಂಕ ಕಡಿಮೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ,  'ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News