ಪೊಲೀಸ್ ಕಾನ್‍ಸ್ಟೇಬಲ್ ಪರೀಕ್ಷೆಯಲ್ಲಿ ಅಕ್ರಮ: ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಗೃಹ ಇಲಾಖೆ

Update: 2021-11-04 13:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.4: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಕಲು ಮಾಡಿದ ಪ್ರಕರಣದ ತನಿಖೆಯನ್ನು ರಾಜ್ಯ ಗೃಹ ಇಲಾಖೆ ಸಿಐಡಿ(ಅಪರಾಧ ತನಿಖಾ ವಿಭಾಗ)ಗೆ ವಹಿಸಿದೆ. 

ಅ.24ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ನಕಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬ್ಲ್ಯೂಟೂತ್ ಬಳಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಮಾಹಿತಿಯನ್ನು ನಕಲು ತಂಡಕ್ಕೆ ರವಾನಿಸಿ ನಂತರ ತಂಡದಿಂದ ಉತ್ತರ ಪಡೆದುಕೊಂಡು ಪರೀಕ್ಷಾರ್ಥಿಗಳು ನಕಲು ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ರಾಮತೀರ್ಥ ನಗರದಲ್ಲಿ ದಾಳಿ ನಡೆಸಿದ್ದ ಬೆಳಗಾವಿ ಪೊಲೀಸರು 12 ಜನರನ್ನು ಬಂಧಿಸಿದ್ದರು. ಬಂಧಿತರಿಂದ 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲ್ಯೂಟೂತ್, 3 ಟ್ಯಾಬ್ ಹಾಗೂ ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಿದ್ದರು.

ಇಬ್ಬರು ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಓರ್ವ ಪೊಲೀಸ್ ಕಾನ್‍ಸ್ಟೇಬಲ್ ಸೇರಿದಂತೆ ಇನ್ನಿತರೆ ಪ್ರಭಾವಿಗಳ ಕೈವಾಡ ಇರುವ ಶಂಕೆ ಹಿನ್ನೆಲೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ವರ್ಗಾವಣೆ ಮಾಡಲು ರಾಜ್ಯ ಗೃಹ ಇಲಾಖೆ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News