×
Ad

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2021-11-04 19:55 IST

ಉಡುಪಿ, ನ.4: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ /ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿ ಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್-www.ssp.postmatric.karnataka.gov.in -ನಲ್ಲಿ ಸೂಕ್ತ ದಾಖಲಾತಿಗಳ ಮೂಲಕ ಅರ್ಜಿ ಸಲ್ಲಿಸಲು ನವಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರ ಹಾಗೂ ಮಾಹಿತಿಗಳಿಗಾಗಿ ಇಲಾಖೆಯ ವೆಬ್‌ಸೈಟ್ -www.bcwd.karnataka.gov.in- ಅಥವಾ ದೂ.ಸಂ: 8050770005 ಮತ್ತು 8050770004ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News