×
Ad

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ

Update: 2021-11-04 19:57 IST

ಉಡುಪಿ, ನ.4: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರಿ ವಿದ್ಯಾರ್ಥಿನಿಲಯ ಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಪ್ರತಿ ವಿದ್ಯಾರ್ಥಿಗೆ ಮಾಹೆಯಾನ ರೂ. 1,500ರಂತೆ 6 ತಿಂಗಳಿಗೆ ಗರಿಷ್ಠ ರೂ.9,000 ಅನುದಾನ ಲಭ್ಯತೆಯನುಸಾರ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಹಿಂದಿನ ವರ್ಷದ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು. ಈ ಸೌಲಭ್ಯ ಪಡೆಯಲು ವಿದ್ಯಾರ್ಥಿ ಪೋಷಕರ ಕುಟುಂಬದ ವಾರ್ಷಿಕ ವರಮಾನ ಪ್ರವರ್ಗ-1 ರೂ.2.50ಲಕ್ಷ ಹಾಗೂ ಇತರ ಅಲ್ಪಸಂಖ್ಯಾತ ವರ್ಗದವರಿಗೆ ರೂ 2 ಲಕ್ಷ ಹೊಂದಿರಬೇಕು.

ಆನ್‌ಲೈನ್ ಅರ್ಜಿ ನಮೂನೆಯನ್ನು ಇಲಾಖೆ ವೆಬ್‌ಸೈಟ್: -https://dom.karnataka.gov.in/udupi/public-ನಲ್ಲಿ ಪಡೆದು ಸೂಕ್ತ ದಾಖಲೆ ಗಳೊಂದಿಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಅಥವಾ ಜಿಲ್ಲಾ ಕಚೇರಿಗೆ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ, ದೂರವಾಣಿ ಸಂಖ್ಯೆ: 0820-2574596, ಕುಂದಾಪುರ, ದೂರವಾಣಿ ಸಂಖ್ಯೆ: 08254-230370 ಹಾಗೂ ಕಾರ್ಕಳ, ದೂರವಾಣಿ ಸಂಖ್ಯೆ: 08259-231101ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News