×
Ad

ಕಾರ್ಯಕರ್ತರ ನೆರವಿನೊಂದಿಗೆ ಪಕ್ಷ ಸಂಘಟನೆ: ಎಚ್.ಡಿ.ದೇವೇಗೌಡ

Update: 2021-11-04 20:46 IST

ಬೆಂಗಳೂರು, ನ.4: ಯಾವುದೇ ಪಕ್ಷವನ್ನ ಕಟ್ಟಬೇಕಾದರೆ ಆರ್ಥಿಕ ಶಕ್ತಿ ಬೇಕು. ಜೆಡಿಎಸ್ ಪ್ರಾದೇಶಿಕ ಪಕ್ಷ. ಇದನ್ನ ಉಳಿಸಬೇಕು, ಇದರ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರ ಜೊತೆ ಚರ್ಚಿಸಿ ಪ್ರತಿ ಜಿಲ್ಲೆಯ ಕಾರ್ಯಕರ್ತರ ನೆರವಿನೊಂದಿಗೆ ರಾಜ್ಯಾದ್ಯಂತ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದೆವು. ಅಲ್ಲಿ 38 ಸಾವಿರ ಮುಸ್ಲಿಂ ಮತದಾರರಿದ್ದಾರೆ. ಆ ಮತಗಳು ಯಾರಿಗೆ  ಹೋಯ್ತು..? ಎಂದು ಪ್ರಶ್ನಿಸಿದರು.

ಮುಸ್ಲಿಮರು ತಮ್ಮ ಮತಗಳನ್ನು ಬಿಜೆಪಿಗೆ ಕೊಟ್ರಾ..? ನಮಗೆ ಮತ ಹಾಕಿಲ್ಲ ಅಂದ್ರೆ ಕಾಂಗ್ರೆಸ್‍ಗೆ ಹಾಕ್ತಾರೆ. ಕಾಂಗ್ರೆಸ್ ಸೋಲಿಸಲು ಜೆಡಿಎಸ್‍ನವರು ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ ಎಂದು ಪ್ರಚಾರ ಮಾಡಿದರು. ಈ ಬಗ್ಗೆ ನಾನು ಮಾತನಾಡಲ್ಲ ಎಂದು ಅವರು ಹೇಳಿದರು.

ನಾನು ಉಪಚುನಾವಣೆ ಪ್ರಚಾರಕ್ಕೆ ಹೋಗಲ್ಲ. ಆದರೆ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಪ್ರಚಾರಕ್ಕೆ ಹೋಗಿದ್ದೆ. ಆದರೂ ಸೋಲಾಗಿದೆ ಇದರ ಬಗ್ಗೆ ಪಕ್ಷದಲ್ಲಿ ಚರ್ಚಿಸುತ್ತೇವೆ ಎಂದು ದೇವೇಗೌಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News