×
Ad

ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ ನವೆಂಬರ್ 30 ಕೊನೆಯ ದಿನ

Update: 2021-11-04 21:28 IST

ಮಂಗಳೂರು, ನ.4: 2021-22ನೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌದ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿ ಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು. ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ. ಅರ್ಜಿಯನ್ನು ಗೂಗಲ್ ಫಾರ್ಮ್ ಮೂಲಕವೇ ಭರ್ತಿ ಮಾಡಬೇಕು. ಅರ್ಜಿಯ ಜೊತೆ ದೃಢೀಕೃತ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಗೆ ಸಲ್ಲಿಬೇಕು.

ಅರ್ಜಿಯನ್ನು(https://dom.karnataka.gov.in/dakshina_kannada/public)ಲಿಂಕ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News