×
Ad

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಹಲವು ಪ್ರದೇಶಗಳು ಜಲಾವೃತ

Update: 2021-11-04 23:11 IST

ಬೆಂಗಳೂರು: ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡಿದೆ.

ನಗರದ ಯಶವಂತಪುರ, ನಾಗರಬಾವಿ, ಅನ್ನಪೂರ್ಣೇಶ್ವರಿನಗರ, ಮೈಸೂರು ರಸ್ತೆ, ಬನಶಂಕರಿ, ಚಂದ್ರಾಲೇಔಟ್, ವಿಜಯನಗರ, ಮಾಗಡಿ ರಸ್ತೆ, ಸುಂಕದಕಟ್ಟೆ, ಉತ್ತರಹಳ್ಳಿ, ಕೆಂಗೇರಿ, ಶಾಂತಿನಗರ, ಆಸ್ಟಿನ್​ಟೌನ್ ಸೇರಿದಂತೆ ಹಲವು ಬಡಾವಣೆಗಳ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News