​ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದತ್ತ ಗಮನ ಹರಿಸಲಿ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2021-11-05 06:48 GMT

ಹುಬ್ಬಳ್ಳಿ : ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ವಿಭಜನೆಯಾಗುವ ಹಂತದಲ್ಲಿದೆ. ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದ ವಿಚಾರಗಳತ್ತ ಮೊದಲು ಗಮನಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಹಾನಗಲ್ ಸೋಲಿನ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸಿಂದಗಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ವಿಭಜನೆಯಾಗುವ ಹಂತದಲ್ಲಿದ್ದು ಅವರು ತಮ್ಮ ಪಕ್ಷದತ್ತ ಗಮನ ಹರಿಸಲಿ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News