ಮದುವೆಯಾದ ಮೂರೇ ತಿಂಗಳಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು
Update: 2021-11-05 14:25 IST
ಕಲಬುರಗಿ: ಪ್ರೀತಿಸಿ ಮದುವೆಯಾದ ನವವಿವಾಹಿತೆ ಮೂರೇ ತಿಂಗಳಲ್ಲಿ ತನ್ನ ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಗರದ ರಾಜಾಪುರ ಬಡಾವಣೆಯಲ್ಲಿ ಗುರುವಾರ ನಡೆದಿದೆ.
ರಮಾಬಾಯಿ (23) ಮೃತ ನವವಿವಾಹಿತೆ. ಮೂರು ತಿಂಗಳ ಹಿಂದೆಯಷ್ಟೇ ರಾಹುಲ್ ಎಂಬ ಯುವಕನ ಜೊತೆ ಮದುವೆಯಾಗಿತ್ತು ಎಂದು ತಿಳಿದುಬಂದಿದ್ದು, ಮದುವೆಯ ಬಳಿಕ ಗಂಡನ ಮನೆಯವರಿಂದ ರಮಾಬಾಯಿಗೆ ನಿತ್ಯ ಜಾತಿ ನಿಂದನೆ ಮಾಡಲಾಗುತ್ತಿದ್ದು ಎಂದು ದೂರಲಾಗಿದೆ.
ಗುರುವಾರ ಸಂಜೆ ರಮಾಬಾಯಿ ನಿಗೂಢವಾಗಿ ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.