ಪಂಜಾಬ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಧಿಕೃತವಾಗಿ ಹಿಂಪಡೆದ ಸಿಧು

Update: 2021-11-05 12:47 GMT

ಹೊಸದಿಲ್ಲಿ: ಪಂಜಾಬ್‌ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹಠಾತ್‌ ರಾಜೀನಾಮೆ ನೀಡಿದ ಒಂದು ತಿಂಗಳ ಬಳಿಕ ತಮ್ಮ ರಾಜೀನಾಮೆಯನ್ನು ಹಿಂಪಡೆದಿರುವುದಾಗಿ ಪತ್ರಕಾಗೋಷ್ಠಿಯಲ್ಲಿ ನವಜೋತ್‌ ಸಿಂಗ್‌ ಸಿಧು ಅಧಿಕೃತ ಹೇಳಿಕೆ ನೀಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಜಾಬ್‌ಗೆ ಹೊಸ ಅಡ್ವೊಕೇಟ್ ಜನರಲ್ (ಎಜಿ) ಬಂದ ದಿನ ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು. ಸತ್ಯದ ಹಾದಿಯಲ್ಲಿರುವಾಗ ಹುದ್ದೆಗಳು ಮುಖ್ಯವಲ್ಲ’ ​​ಎಂದೂ ಅವರು ಹೇಳಿದರು.

ಜುಲೈ 19 ರಂದು ಪಿಪಿಸಿಸಿ ಮುಖ್ಯಸ್ಥರಾಗಿ ನೇಮಕಗೊಂಡ ಸಿಧು, ಅಮರಿಂದರ್ ಸಿಂಗ್ ನಂತರ ಮುಖ್ಯಮಂತ್ರಿಯಾದ ಚರಂಜಿತ್ ಸಿಂಗ್ ಚನ್ನಿ ನೇತೃತ್ವದ ಹೊಸ ಸರ್ಕಾರದಲ್ಲಿ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೂಡಲೇ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News