ರಾಜ್ಯದಲ್ಲಿ ಶನಿವಾರ 224 ಕೊರೋನ ಪ್ರಕರಣ ದೃಢ, 5 ಮಂದಿ ಸಾವು

Update: 2021-11-06 14:42 GMT

ಬೆಂಗಳೂರು, ನ.6: ರಾಜ್ಯದಲ್ಲಿ ಶನಿವಾರ 224 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನರು ಸೋಂಕಿಗೆ ಬಲಿಯಾಗಿದ್ದು, 317 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,89,713ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,107ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8090ಕ್ಕೆ ಇಳಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

5 ಸೋಂಕಿತರು ಬಲಿ: ಬೆಳಗಾವಿ 1, ಬೀದರ್ 1, ಕೋಲಾರ 1, ಕೊಪ್ಪಳ 1, ಮಂಡ್ಯ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 224 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 148, ಚಾಮರಾಜನಗರ 2, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣಕನ್ನಡ 15, ದಾವಣಗೆರೆ 1, ಹಾಸನ 4, ಕೊಡಗು 1, ಕೋಲಾರ 6, ಮಂಡ್ಯ 7, ಮೈಸೂರು 9, ಶಿವಮೊಗ್ಗ 3, ತುಮಕೂರು 7, ಉಡುಪಿ 10, ಉತ್ತರಕನ್ನಡ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News