ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

Update: 2021-11-06 18:01 GMT

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ `ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಕರ್ನಾಟಕ ಸರಕಾರ ನಡೆಸಲಿರುವ `ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ'ಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ನ.12 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ `ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News