×
Ad

ಎಂ.ಪಿ.‌ರೇಣುಕಾಚಾರ್ಯ ಹಾಗೂ ಕುಟುಂಬಸ್ಥರಿಂದ ಮರಣೋತ್ತರ ನೇತ್ರ ದಾನ: ನಾಳೆ ಅಧಿಕೃತ ಘೋಷಣೆ

Update: 2021-11-07 11:27 IST

ಬೆಂಗಳೂರು, ನ‌.7:  ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ-ನ್ಯಾಮತಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಕುಟುಂಬದವರು ಮರಣೋತ್ತರ ನಂತರ ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್  ನಿಧನರಾದ ಸಂದರ್ಭದಲ್ಲಿ ತಮ್ಮ ಕಣ್ಣುಗಳನ್ನು ಬೇರೊಬ್ಬರಿಗೆ ದಾನ ಮಾಡಿ ಬೆಳುಕು ನೀಡುವ ಮೂಲಕ ಸಾವಿನಲ್ಲಿ ಸಾರ್ಥಕ ಮೆರೆದಿದ್ದರು. ಇದರಿಂದ ಪ್ರೇರಣೆಗೊಂಡಿರುವ ಎಂ.ಪಿ.ರೇಣುಕಾಚಾರ್ಯ  ನೇತ್ರದಾನ ಮಾಡುವ ಮಹತ್ವದ ನಿರ್ಧಾರವನ್ನು ನ.8ರಂದು  ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಸೋಮವಾರ ಸಂಜೆ 5 ಗಂಟೆಗೆ  ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಕ ರೇಣುಕಾಚಾರ್ಯ  ಅವರ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಶ್ರದ್ದಾಂಜಲಿ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.  ಈ ಸಂದರ್ಭದಲ್ಲಿ ವರನಟ ಡಾ.ರಾಜ್‍ಕುಮಾರ್  ಹಾಗೂ ಪುನೀತ್ ರಾಜ್‍ಕುಮಾರ್ ಅವರ  ನೂರಾರು ಅಭಿಮಾನಿಗಳು ತಮ್ಮ ನೇತ್ರಗಳನ್ನು ದಾನ ಮಾಡಲು ತಮ್ಮ ಹೆಸರುಗಳನ್ನು ನೋಂದಾಯಿಸುವ ಮಹತ್ವದ ನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News