×
Ad

ವಿಟ್ಲ: ಅಂಗಡಿಯೊಂದರ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

Update: 2021-11-07 12:07 IST

ಬಂಟ್ವಾಳ, ನ.7: ವಿಟ್ಲದ ಅಂಗಡಿಯೊಂದರ ಬಳಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿಯನ್ನು ಮಾರಪ್ಪ ಎಂದು ತಿಳಿದು ಬಂದಿದೆ. ವಿಟ್ಲ - ಕಾಸರಗೋಡು ರಸ್ತೆಯಲ್ಲಿರುವ ಅಂಗಡಿಯೊಂದರ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದೆ.

ಮಾರಪ್ಪ ಮದ್ಯಪಾನದ ಚಟ ಹೊಂದಿದ್ದು, ಅವರ ಮೃತದೇಹ ವಿದ್ಯುತ್ ಮೈನ್ಸ್ ಬಳಿ‌ ಕಂಡುಬಂದಿದೆ. ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಮೆಸ್ಕಾಂ ಸಿಬ್ಬಂದಿ ಹಾಗೂ ವಿಟ್ಲ‌ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News