ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ನಾಳೆ ಸಂಪುಟ ಸಭೆಯಲ್ಲಿ ದಿನಾಂಕ ಅಂತಿಮ ಸಾಧ್ಯತೆ

Update: 2021-11-07 12:58 GMT

ಬೆಂಗಳೂರು, ನ. 7: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ `ನೂತನ ಮರಳು ನೀತಿ' ಜಾರಿ, ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಪರಾಮರ್ಶೆ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಸಂಬಂಧ ಚರ್ಚೆಗೆ ನಾಳೆ(ನ.8) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ನಾಳೆ(ನ.8) ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-334ರಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಬೆಳಗಾವಿಯಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳು ಚರ್ಚೆಗೆ ಬರಲಿವೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News