×
Ad

ಉಡುಪಿ ಜಿಲ್ಲೆಯಾದ್ಯಂತ ಕ್ಯಾಂಪಸ್ ಫ್ರಂಟ್ ಡೇ ಆಚರಣೆ

Update: 2021-11-07 18:42 IST

ಉಡುಪಿ, ನ.7: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12ನೆ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕನ್ನಂಗಾರ್, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ಮಾತನಾಡಿ, ಭಾರತದಲ್ಲಿ ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಪಾಯದಲ್ಲಿದೆ ಎಂಬ ಆತಂಕಕಾರಿ ಕೂಗುಗಳು ಕೇಳಿಬರುತ್ತಿವೆ. ದೇಶ ಮತ್ತು ರಾಜ್ಯವನ್ನು ಆಳುತ್ತಿರುವ ಸರಕಾರಗಳು ಸಂವಿಧಾನದ ಪ್ರತಿಜ್ಞೆಯೊಂದಿಗೆ ಅಧಿಕಾರ ವಹಿಸಿ ಕೊಂಡ ಬಳಿಕ ಅದೇ ಸಂವಿಧಾನವನ್ನು ಬುಡಮೇಲುಗೊಳಿಸುವ ಹುನ್ನಾರದಲ್ಲಿ ತೊಡಗಿದೆ. ಸರಕಾರದ ಜನವಿರೋಧಿ ನೀತಿಗಳನ್ನು, ಸಂವಿಧಾನ ವಿರೋಧಿ ಕಾಯ್ದೆಗಳನ್ನು, ವಿದ್ಯಾರ್ಥಿ ವಿರೋಧಿ ತೀರ್ಮಾನ ಗಳ ವಿರುದ್ಧ ರಾಜಿ ರಹಿತ ಹೋರಾಟ ದೊಂದಿಗೆ ಕ್ಯಾಂಪಸ್ ಫ್ರಂಟ್ ಮುಂದೆ ಸಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಿಎಫ್‌ಐ ಕಾರ್ಯದರ್ಶಿ ಸಾಧಿಕ್, ಜಿಲ್ಲಾ ಮುಖಂಡ ರಾದ ಝಂಝಂ, ಉಪಾಧ್ಯಕ್ಷ ಅರ್ಫಾಝ್, ಜೊತೆ ಕಾರ್ಯದರ್ಶಿ ನಿದಾ ಅಫ್ರಾ, ಜಿಲ್ಲಾ ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News