ಬಾಲ ಕಾರ್ಮಿಕರ ಪತ್ತೆಗೆ ಸಮೀಕ್ಷೆ ಆರಂಭ
ಮಂಗಳೂರು, ನ.7: ಕೋವಿಡ್ ಸೋಂಕಿನಿಂದಾಗಿ ಶಾಲೆಗಳ ಭೌತಿಕ ತರಗತಿಗಳು ನಡೆಯದ ಕಾರಣ ಹಾಗೂ ಕೊರೋನ ಕಾರಣಗಳಿಂದಾಗಿ ಪಾಲಕರನ್ನು ಕಳೆದುಕೊಂಡ ಮಕ್ಕಳು ಮರಳಿ ಶಾಲೆಗೆ ತೆರಳುತ್ತಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಮತ್ತು ಕೋವಿಡೇತರ ಕಾರಣಗಳಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಅಥವಾ ಇಬ್ಬರನ್ನು ಕಳೆದುಕೊಂಡ ಮಕ್ಕಳು ಸದ್ಯ ಶಾಲೆಗೆ ಹೋಗುತ್ತಿದ್ದಾರೋ ಅಥವಾ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೋ ಎಂಬುದನ್ನು ಕಂಡುಕೊಳ್ಳಲು ಈ ಸಮೀಕ್ಷಾ ಕಾರ್ಯ ನಡೆಯಲಿದೆ.
ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಚೈಲ್ಡ್‌ಲೈನ್ ನಂಬರ್ -1098, ಕಾರ್ಮಿಕ ಇಲಾಖೆಯ ದೂ.ಸಂ: 0824-2435343, 2433132, 2437479 ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ದೂ. ಸಂ: 2433131ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಬಾಲ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿದವರಿಗೆ 5,000 ರೂ.ಗಳ ನಗದು ಬಹುಮಾನ ನೀಡಲಾಗುವುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.