ಮಂಡ್ಯ; ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ
Update: 2021-11-07 22:28 IST
ಮಂಡ್ಯ, ನ.7: ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶ್ರೀರಂಗಪಟ್ಟಣ ತಾಲೂಕು ಕೂಡಲಕುಪ್ಪೆ ಗ್ರಾಮದಲ್ಲಿ ರವಿವಾರ ಬೆಳಗ್ಗೆ ನಡೆದಿದ್ದು, ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ.
ಗ್ರಾಮದ ದೇವರಾಜು(55) ಹಾಗೂ ರೂಪ(45) ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇವರಿಗೆ ದರ್ಶನ್ ಮತ್ತು ಧನುಷ್ ಎಂಬ ಮಕ್ಕಳಿದ್ದಾರೆ.
ಮಕ್ಕಳನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಕ್ಕಳ ಚೀರಾಟ ಕೇಳಿ ದಾವಿಸಿದ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ದಂಪತಿ ನೇಣುಬಿಗಿದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ದೇವರಾಜು ವೃತ್ತಿಯಲ್ಲಿ ಆಟೊ ಚಾಲಕನಾಗಿದ್ದ ಎಂದು ತಿಳಿದು ಬಂದಿದೆ.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.