ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ; ತಪ್ಪಿದ ದುರಂತ

Update: 2021-11-07 17:26 GMT

ಶಿವಮೊಗ್ಗ, ನ.07: ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ರವಿವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ನಡೆದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ನವಜಾತ ಶಿಶುಗಳ ವಾರ್ಡ್‌ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು,ತಕ್ಷಣ ಅಲ್ಲಿದ್ದ ರೋಗಿಗಳು ಮತ್ತು ಅವರ ಪರಿಚಾರಕರು ಆಸ್ಪತ್ರೆಯಿಂದ ಹೊರಗಡೆ ಓಡಿಬಂದಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ‌ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೆಡಿಕಲ್ ಕಾಲೇಜಿನ ಹಿರಿಯ ಅಧಿಕಾರಿಗಳು ಹಾಗೂ ವೈದ್ಯರು ಸ್ಥಳಕ್ಕೆ ಆಗಮಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News