×
Ad

ಮಂಗಳೂರು: ಡಯಟ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪಿಯಿಂದ ಆತ್ಮಹತ್ಯೆಗೆ ಯತ್ನ

Update: 2021-11-08 18:48 IST
ನವೀನ್

ಮಂಗಳೂರು, ನ.8: ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್ ನಲ್ಲಿ ಆರೋಪಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ಆರೋಪಿಯನ್ನು ನವೀನ್ (31) ಎಂದು ಗುರುತಿಸಲಾಗಿದೆ.

ನವೀನ್ ಆಸ್ಪತ್ರೆಯ ಜೈಲ್ ವಾರ್ಡ್‌ನಲ್ಲಿ ಬೆಡ್‌ಶೀಟ್‌ನ್ನು ಕಿಟಕಿಗೆ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಕ್ಕೆ ಅಪಾಯವಿಲ್ಲ ಎಂದು ಹೇಳಲಾಗಿದೆ.

ಈತ ಈ ಹಿಂದೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಗೆ ನುಗ್ಗಿ ಅಲ್ಲಿನ ಮೂವರು ಮಹಿಳಾ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪದಲ್ಲಿ ಬಂಧಿತನಾಗಿದ್ದು, ಅನಾರೋಗ್ಯದಿಂದ ಬಳಲುತಿದ್ದ ಈತನಿಗೆ ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News