‘ಪಿಎಂ ಕೇರ್ ಫಾರ್ ಚಿಲ್ಡ್ರನ್’ 10 ಲಕ್ಷ ರೂ. ನೆರವಿಗೆ ಅರ್ಜಿಗಳ ಆಹ್ವಾನ
ಉಡುಪಿ, ನ.8: ಕೋವಿಡ್ ಸಾಂಕ್ರಾಮಿಕದಿಂದ 2020ರ ಮಾರ್ಚ್ 11ರ ಬಳಿಕ ತಮ್ಮಿಬ್ಬರು ಪೋಷಕರನ್ನು/ಉಳಿದ ಪೋಷಕರನ್ನು/ಕಾನೂನು ಬದ್ಧ/ ದತ್ತು ಪೋಷಕರನ್ನು ಕಳೆದುಕೊಂಡಿರುವ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಹಾಗೂ ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವನ ನಿರ್ವಹಿಸಲು ಅನುವಾಗುವಂತೆ ತಕ್ಷಣ ನೆರವಿನ ಜೊತೆಗೆ ಪ್ರತಿ ಮಗುವಿಗೆ 23 ವರ್ಷ ತುಂಬಿದ ನಂತರ ತಲಾ 10 ಲಕ್ಷ ರೂ.ಗಳನ್ನು ನೀಡಲು ಪ್ರಧಾನ ಮಂತ್ರಿಗಳು ‘ಪಿಎಂ ಕೇರ್ ಫಾರ್ ಚಿಲ್ಡ್ರನ್’ ಎಂಬ ಯೋಜನೆಯನ್ನು ಘೋಷಿಸಿದ್ದಾರೆ.
ಈ ಯೋಜನೆಗೆ ಅರ್ಹವಿರುವ ಫಲಾನುಭವಿಗಳು ನೇರವಾಗಿ ಪೋರ್ಟಲ್ -https://pmcaresforchildren.inನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಗದಿತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ/ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಿ ಬಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ:0820-2574964ನ್ನು ಸಂಪರ್ಕಿಸಬಹುದು ಎಂದು ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.