ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ
Update: 2021-11-08 20:25 IST
ಉಡುಪಿ, ನ.8: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಇವರ ಆಶ್ರಯದಲ್ಲಿ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಎಸ್‌ಡಿಎ/ಎಫ್‌ಡಿಎ/ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನವೆಂಬರ್ 12ರಿಂದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿ ಏರ್ಪಡಿಸಲಾಗಿದ್ದು, ಪಿಯುಸಿ ಅಥವಾ ಯಾವುದೇ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ.
ತರಬೇತಿ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574869,9945856670ನ್ನು ಸಂಪರ್ಕಿಸು ವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.