×
Ad

ಸಾಲಿಗ್ರಾಮದಲ್ಲಿ ಪುಷ್ಪಕ ಯಾನ ಏಕವ್ಯಕ್ತಿ ಯಕ್ಷಗಾನ ಪ್ರದರ್ಶನ

Update: 2021-11-08 20:32 IST

ಕೋಟ, ನ.8: ಮಂಗಳೂರಿನ ಕರ್ನಾಟಕ ಯಕ್ಷಧಾಮ ಹಾಗೂ ಭೂಮಿಕಾ ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಕಲಾವಿದ ಕ್ಯಾದಗಿ ಮಹಾಬಲೇಶ್ವರ ಭಟ್ ಸಂಯೋಜಿಸಿದ ಏಕವ್ಯಕ್ತಿ ಯಕ್ಷಗಾನ ಪುಷ್ಪಕ ಯಾನ ಕಾರ್ಯಕ್ರಮ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ ವಠಾರದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್.ಕಾರಂತ ಉದ್ಘಾಟಿಸಿದರು. ಈ ಸಂದರ್ಭ ಕ್ಯಾದಗಿ ಮಹಾಬಲೇಶ್ವರ ಭಟ್ ಅವರನ್ನು ಸನ್ಮಾನಿಸಲಾಯಿತು. ಎರಡು ವರ್ಷಗಳಿಂದ ಜಗತ್ತಿನಲ್ಲಿ ಕೊರೊನಾ ಮಹಾಮಾರಿ ಬಂದು ಎಲ್ಲರೂ ನಲುಗಿ ಹೋಗಿದ್ದಾರೆ. ಇದರಿಂದಾಗಿ ಮನೋರಂಜನೆ ಯಾರಿಗೂ ಅನಿವಾರ್ಯವಲ್ಲ. ಆದರೆ ಅದನ್ನು ನಂಬಿ ಬದುಕುವ ಕಲಾವಿದರಿಗೆ ಮನರಂಜನೆ ಕಾರ್ಯಕ್ರಮ ಅನಿವಾರ್ಯ ಎಂದರು.

ಮಕ್ಕಳ ಮೇಳದ ಸಂಚಾಲಕ ಶ್ರೀಧರ ಹಂದೆ, ಕಲಾ ಸಾಹಿತಿ ಮಂಗಳೂರು ಎಚ್.ಜನಾರ್ದನ ಹಂದೆ ಉಪಸ್ಥಿತರಿದ್ದರು. ಸಾಲಿಗ್ರಾಮ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ತಾರಾನಾಥ್ ಹೊಳ್ಳ ಸ್ವಾಗತಿಸಿದರು. ಉಪನ್ಯಾಸಕ ಹಾಗೂ ಕಲಾವಿದ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News