ಬೆಂಗಳೂರು: ತ್ರಿಪುರಾ ಕೋಮುಗಲಭೆ ಖಂಡಿಸಿ ಎಐಸಿಸಿಟಿಯು ಪ್ರತಿಭಟನೆ
Update: 2021-11-08 21:55 IST
ಬೆಂಗಳೂರು, ನ.8: ತ್ರಿಪುರಾದಲ್ಲಿ ಮುಸ್ಲಿಮರ ಮೇಲೆ ನಡೆದ ದೌರ್ಜನ್ಯ, ಕೋಮುಗಲಭೆ ಘಟನೆಗಳನ್ನು ಖಂಡಿಸಿ ಎಐಸಿಸಿಟಿಯು ಸದಸ್ಯರು ಪ್ರತಿಭಟನೆ ನಡೆಸಿದರು.
ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಎಐಸಿಸಿಟಿಯು ಸದಸ್ಯರು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯ ನೆಪದಲ್ಲಿ ಹಲವು ದಿನಗಳಿಂದ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಮುಸಲ್ಮಾನರ ಮನೆಗಳು, ಅಂಗಡಿಗಳು ಮತ್ತು ಮಸೀದಿಗಳ ಮೇಲೆ ದಾಳಿ ನಡೆಸಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಇಲ್ಲಿನ ಮುಸ್ಲಿಮ್ ಕುಟುಂಬಗಳು ಅತ್ಯಂತ ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದು, ಈ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪೊಲೀಸರು ಫ್ಯಾಶಿಸ್ಟ್ ಗೂಂಡಾಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.