ಮಳೆಗಾಲ ಮುಗಿಯುವವರೆಗೆ ಅಮ್ಮಾ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಊಟ ನೀಡಲಾಗುವುದು:ಸ್ಟಾಲಿನ್

Update: 2021-11-09 11:04 GMT

ಚೆನ್ನೈ: ಮಳೆಗಾಲ ಮುಗಿಯುವವರೆಗೆ ಅಮ್ಮಾ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಊಟ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.

ಸಿಎಂ ಎಂಕೆ ಸ್ಟಾಲಿನ್ ಅವರು ಮಳೆ ಪೀಡಿತ, ಜಲಾವೃತ ಪ್ರದೇಶಗಳ ಪರಿಸ್ಥಿತಿ ಅವಲೋಕಿಸಿದ್ದಾರೆ. ನಗರದ ವಿವಿಧ ಸ್ಥಳಗಳಲ್ಲಿ ಆಹಾರವನ್ನು ವಿತರಿಸಿದ್ದಾರೆ.

ಚೆನ್ನೈ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರಕಾರದಿಂದ ಪಡೆದಿರುವ ಕೋಟ್ಯಂತರ ರೂಪಾಯಿ ಹಣದ ಗತಿಯೇನು ಎಂದು ಎಂ.ಕೆ.ಸ್ಟಾಲಿನ್ ಮಂಗಳವಾರ ಪ್ರಶ್ನಿಸಿದ್ದಾರೆ.

ಎಐಎಡಿಎಂಕೆ ಸರಕಾರವು ಮಳೆನೀರು ಚರಂಡಿ ಹಾಗೂ  ಇತರ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮಾಡಿದೆ ಎಂದು ಸ್ಟಾಲಿನ್ ಆರೋಪಿಸಿದರು. ಯೋಜನೆಯಡಿಯಲ್ಲಿ ತೊಡಗಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಹೆಚ್ಚುವರಿ ಮಳೆನೀರು ಜಲಾಶಯಗಳಿಂದ ಹೊರಹಾಕಲಾಗುತ್ತಿದ್ದು, ಚೆನ್ನೈನ ಹಲವಾರು ರಸ್ತೆಗಳು ತುಂಬಿಹೋಗಿದ್ದು ನದಿಗಳನ್ನು ಹೋಲುತ್ತಿವೆ ಮತ್ತು ತಮಿಳುನಾಡಿನಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ  60 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ರಾಜ್ಯದ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News