ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ

Update: 2021-11-09 12:30 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ನ.9: ಪೂರ್ವ ಅರಬ್ಬೀ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ಬಳ್ಳಾರಿ ಮತ್ತು ದಾವಣಗೆರೆ ಹೊರತುಪಡಿಸಿ ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಕರಾವಳಿ ಪ್ರದೇಶವಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸಮುದ್ರಕ್ಕಿಂತ 5.8 ಕಿಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿದೆ. ಮುಂದಿನ 54 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಡಬಹುದು ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News