ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಅಹ್ವಾನ
Update: 2021-11-09 20:01 IST
ಮಂಗಳೂರು, ನ.9: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ ಹಾಗೂ ಸಿಖ್ಖ್ ಜನಾಂಗದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು kmdconline.karnataka.gov.in ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಇಂಡೆಮ್ನಿಟಿ ಬಾಂಡ್ (Indemnity Bond) ಹಾಗೂ ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಿದ ಇನ್ನಿತರ ದಾಖಲಾತಿಯನ್ನು ಕೌನ್ಸಿಲಿಂಗ್ ಮುಗಿದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ‘‘ಮೌಲಾನಾ ಅಝಾದ್ ಭವನ’’ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.