×
Ad

ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಗೆ ಡಿಪಿಆರ್ ಅಂತಿಮಗೊಳಿಸಿ: ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ

Update: 2021-11-09 21:03 IST

ಉಡುಪಿ, ನ.9: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಮೇಶ್ವರ ಬೀಚ್ ಹಾಗೂ ಮರವಂತೆ ಬೀಚ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿಪಿಆರ್‌ನ್ನು ಅಂತಿಮಗೊಳಿಸಿ ಕಾಮಗಾರಿಯನ್ನು ಕೈಗೆತ್ತಿ ಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಅವರು ಈ ಸೂಚನೆಯನ್ನು ನೀಡಿದರು.

ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ, ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಪ್ರಸ್ತಾಪಿಸಿದರು. ಪ್ರವಾಸೋದ್ಯಮ ಕಾಮಗಾರಿಗಳು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿಆರ್‌ಝಡ್ ಅಧಿಸೂಚನೆಯನ್ನು ನವೆಂಬರ್ ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿ ಗಳಿಗೆ ಸೂಚಿಸಲಾಯಿತು.

ರೋಪ್‌ವೇ:

ಸೌಕೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ.ಪೊನ್ನುರಾಜ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಯ ಕಾರ್ಯದರ್ಶಿಗಳು, ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಇತರೆ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News