×
Ad

ಪ್ರೌಢಶಾಲಾ ಸಹ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಕರಡು ಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ

Update: 2021-11-09 21:35 IST

ಉಡುಪಿ, ನ.9: 2021 ಜನವರಿ 1ರಲ್ಲಿ ಇದ್ದಂತೆ ಮೈಸೂರು ವಿಭಾಗದ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳ ಗ್ರೇಡ್-2 ತತ್ಸಮಾನ ವೃಂದದ ತಾತ್ಕಾಲಿಕ ಜೇಷ್ಠತಾ ಕರಡು ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ -www.schooleducation.kar.nic.in-ನಲ್ಲಿ ಪ್ರಕಟಿಸಲಾಗಿದೆ.

ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಬಾಧಿತ ಶಿಕ್ಷಕರು ನವೆಂಬರ್ 18ರೊಳಗೆ ಅಂತರ್‌ಜಾಲದಲ್ಲಿ ಪ್ರಕಟಿಸಲಾದ ಪಟ್ಟಿಯಲ್ಲಿ ಹೆಸರು ಇರುವ ಪಟ್ಟಿಯ ಮುದ್ರಿತ ಪ್ರತಿಯೊಂದಿಗೆ, ಸಮರ್ಥನೀಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮುಖ್ಯ ಶಿಕ್ಷಕರ ದೃಢೀಕರಣ ದೊಂದಿಗೆ, ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News