ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ ರಾಜಸ್ಥಾನ ಸರಕಾರ

Update: 2021-11-09 16:19 GMT

ಜೋಧ್‌ಪುರ/ಜೈಪುರ: ಅಬಕಾರಿ ಸುಂಕವನ್ನು ಮತ್ತಷ್ಟು ಕಡಿತಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇತರ ರಾಜ್ಯಗಳಂತೆ ಇಂಧನದ ಮೇಲಿನ ವ್ಯಾಟ್ ಅನ್ನು ತಮ್ಮ ಸರಕಾರವೂ ಕಡಿಮೆ ಮಾಡುತ್ತದೆ ಎಂದು ಮಂಗಳವಾರ ಹೇಳಿದ್ದಾರೆ.

ಕೇಂದ್ರ ಸರಕಾರವು ನವೆಂಬರ್ 3 ರಂದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ರೂ. 5 ಮತ್ತು ಡೀಸೆಲ್‌ಗೆ  ರೂ. 10 ಕಡಿತಗೊಳಿಸಿತ್ತು.

ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದ ನಂತರ ರಾಜ್ಯ ಸರಕಾರವು ಈ ವಿಷಯದ ಬಗ್ಗೆ ಪ್ರತಿಪಕ್ಷಗಳಿಂದ ಒತ್ತಡಕ್ಕೆ ಒಳಗಾಗಿತ್ತು.

ಜೋಧ್‌ಪುರ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೆಹ್ಲೋಟ್, "ಎಲ್ಲಾ ರಾಜ್ಯಗಳು ಬೆಲೆಗಳನ್ನು ಕಡಿಮೆ ಮಾಡಿದಾಗ ನಾವು ವ್ಯಾಟನ್ನು ಕಡಿಮೆ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಹಾಗೂ  ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವ ಮೂಲಕ ನಮ್ಮ ಸರಕಾರವು ಜನರಿಗೆ ಪರಿಹಾರವನ್ನು ನೀಡುತ್ತದೆ'' ಎಂದು  ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News