ಮೈಸೂರು: ನೀರು ಶುದ್ದೀಕರಣ ಘಟಕದಲ್ಲಿ ಅನಿಲ ಸೋರಿಕೆ; ಓರ್ವ ಅಸ್ವಸ್ಥ

Update: 2021-11-09 16:16 GMT

ಮೈಸೂರು: ನೀರು ಶುದ್ದೀಕರಣ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಇದನ್ನು ನಂದಿಸಲು ಹೋದ ಓರ್ವ ಅಗ್ನಿ ಶಾಮಕ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ಟೌನ್ ನಲ್ಲಿ ನಡೆದಿದೆ.

ಟಿ.ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಟಿ.ನರಸೀಪುರ-ಮೈಸೂರು ರಸ್ತೆಯಲ್ಲಿರುವ ನೀರು ಶುದ್ದೀಕರಣ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿದೆ. ಅಲ್ಲಿನ ಸಿಬ್ಬಂದಿಗಳು ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸೂಕ್ತ ರಕ್ಷಾಕವಚ ಹೊಂದದೆ ಅನಿಲ ಸೋರಿಕೆ ತಡೆಯಲು ಮುಂದಾಗಿದ್ದಾರೆ. ಇದರಿಂದ ಓರ್ವ ಅಗ್ನಿಶಾಮಕ ಸಿಬ್ಬಂದಿ ಅಸ್ವಸ್ಥಗೊಂಡಿದ್ದು. ಮತ್ತಿಬ್ಬರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಅಸ್ವಸ್ಥಗೊಂಡ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ  ಹೆಚ್ವಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ನೀರು ಶುದ್ದೀಕರಣ ಘಟಕದ ಒಂದು ಕೀ.ಮೀ.ಸುತ್ತಲಿನ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಸಾರ್ವಜನಿಕರು ಓಡಾಟ ನಡೆಸದಂತೆ ಮೈಕ್ ನಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News