ಅಲ್ಪಸಂಖ್ಯಾತರ ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ
ಬೆಂಗಳೂರು, ನ.9: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್-ಲೈನ್ ಅರ್ಜಿ ಅಹ್ವಾನಿಸಿದೆ.
ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್‌ರು ಮತ್ತು ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ ಪ್ರಾಯೋಜಿತ ಅರಿವು (ವಿಧ್ಯಾಬ್ಯಾಸ ಸಾಲ) ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.
ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ ನ.5 ಆಗಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ, ಅದರ ಹಾರ್ಡ್ ಕಾಫಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸಿಇಟಿ ಅಥವಾ ನೀಟ್ ಪರೀಕ್ಷಾ ಪ್ರವೇಶ ಪ್ರತಿ ಅಥವಾ ಸಿಇಟಿ ಆರ್ಡರ್ ಪ್ರತಿಗಳನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ನೀಡಬೇಕು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.