ನೇತ್ರದಾನಕ್ಕೆ ಶಾಸಕ ಝಮೀರ್ ಅಹ್ಮದ್ ಖಾನ್ ಸಹಿ
Update: 2021-11-10 17:51 IST
ಬೆಂಗಳೂರು: ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ನೇತ್ರದಾನ ಮಾಡಲು ತಮ್ಮ ಹೆಸರು ನೋಂದಾಯಿಸಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅವರ ಅಭಿಮಾನಿಗಳು ಸೇರಿದಂತೆ ಹಲವರು ನೇತ್ರದಾನಕ್ಕೆ ಮುಂದಾಗಿದ್ದು, ಶಾಸಕ ಝಮೀರ್ ಅಹ್ಮದ್ ಖಾನ್ ಬುಧವಾರ ಮಿಂಟೋ ಆಸ್ಪತ್ರೆಗೆ ತೆರಳಿ ನೇತ್ರದಾನ ಮಾಡಲು ತಮ್ಮ ಹೆಸರು ನೋಂದಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಬಿ.ಕೆ.ಅಲ್ತಾಫ್ ಖಾನ್ ಹಾಗೂ ಆಸ್ಪತ್ರೆಯ ಅಧಿಕಾರಿಗಳು ಉಪಸ್ಥಿತರಿದ್ದರು.