×
Ad

ನ.11ರಂದು ಮಹಿಳೆಯರಿಗೆ ಕಾನೂನು ಅರಿವು ಕಾರ್ಯಗಾರ

Update: 2021-11-10 22:27 IST

ಮಂಗಳೂರು, ನ.10: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನ.11ರಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ‘‘ಮಹಿಳೆಯರಿಗೆ ಕಾನೂನು ಅರಿವು’’ ಕುರಿತು ಒಂದು ದಿನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಮುರಲಿಧರ ಪೈ ಬಿ. ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅಧ್ಯಕ್ಷತೆ ವಹಿಸುವರು.

ಹೊಸದಿಲ್ಲಿಯ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಟಿ. ಪಾಪ ಬೋವಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹಿರಿಯ ವಕೀಲರಾದ ಗೌರಿ ಕೆ.ಎಸ್., ಎಸ್.ಪಿ. ಚೆಂಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News