ತಮಿಳುನಾಡು ಮಳೆ: ಮೃತರ ಸಂಖ್ಯೆ 12ಕ್ಕೆ ಏರಿಕೆ

Update: 2021-11-10 18:21 GMT

ಚೆನ್ನೈ, ನ. 9: ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಸಂಭವಿಸಿದ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ತಲುಪಿದೆ ಎಂದು ರಾಜ್ಯ ಕಂದಾಯ ಹಾಗೂ ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ ಆರ್ ರಾಮಚಂದ್ರನ್ ಹೇಳಿದ್ದಾರೆ. ಚೆನ್ನೈಯ 5 ತಂಡ ಸೇರಿದಂತೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (ಎನ್ಡಿಆರ್ಎಫ್) 13 ತಂಡಗಳನ್ನು ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ನಿಯೋಜಿಸಲಾಗಿದೆ. ಹೆಚ್ಚುವರಿ ಬೆಂಬಲಕ್ಕಾಗಿ ಮೂರು ತಂಡಗಳನ್ನು ಮೀಸಲು ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ನವೆಂಬರ್ 11ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಚೆನ್ನೈಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
 
ಈ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರ ಚೆನ್ನೈ, ಕಾಂಚಿಪುರಂ, ತಿರುವಲ್ಲೂರು, ಚೆಂಗಲ್ಪೇಟ್, ಕುಡಲೂರು, ನಾಗಪಟ್ಟಿಣಂ, ತಂಜಾವೂರು, ತಿರುವರೂರ್ ಹಾಗೂ ಮಾಯಿಲತದುತುರೈ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ನವೆಂಬರ್ 11ರ ವರೆಗೆ ರಜೆ ಘೋಷಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News