ಅಸ್ಸಾಂನ ಕರೀಮ್‌ಗಂಜ್ ನಲ್ಲಿ ವೇಗವಾಗಿ ಬಂದ ಟ್ರಕ್‌ಗೆ ಆಟೋ ರಿಕ್ಷಾ ಡಿಕ್ಕಿ, 9 ಮಂದಿ ಸಾವು

Update: 2021-11-11 06:37 GMT
photo: India Today

ಗುವಾಹಟಿ: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಹಾಗೂ  ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್‌ಗಂಜ್ ಜಿಲ್ಲೆಯ ಪಥರ್‌ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನಲ್ಲಿ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು.

ಟ್ರಕ್ ಹಾಗೂ  ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News