ಉಡುಪಿ: ಜಿಲ್ಲೆಯ ಮೂವರಲ್ಲಿ ಕೋವಿಡ್ ಸೋಂಕು ಪತ್ತೆ

Update: 2021-11-11 14:26 GMT
ಸಾಂದರ್ಭಿಕ ಚಿತ್ರ( PTI)

ಉಡುಪಿ: ಜಿಲ್ಲೆಯ ಮೂವರಲ್ಲಿ ಇಂದು ಹೊಸದಾಗಿ ಕೊರೋನ ಸೋಂಕು ಪತ್ತೆಯಾಗಿದೆ. ಗುರುವಾರ ಐವರು ರೋಗದಿಂದ ಗುಣಮುಖರಾದರೆ, ಇನ್ನೂ ಚಿಕಿತ್ಸೆಯಲ್ಲಿರುವವರ ಸಂಖ್ಯೆ 40ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯಲ್ಲಿ ಸೋಂಕು ಕಂಡು ಬಂದಿದೆ. ಮೂವರು ಸಹ ಉಡುಪಿ ತಾಲೂಕಿನವರು. ಸೋಂಕು ಕಂಡುಬಂದ ಮೂವರಿಗೂ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ.
 
2,681 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 2,681 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದು, ಇವರಲ್ಲಿ 190 ಮಂದಿ ಮೊದಲ ಡೋಸ್ ಹಾಗೂ 2,491 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 156 ಮಂದಿ ಮೊದಲ ಡೋಸ್ ಹಾಗೂ 1,882 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 34 ಮಂದಿ ಮೊದಲ ಡೋಸ್ ಹಾಗೂ 603 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ನಾಲ್ವರು ಮುಂಚೂಣಿ ಕಾರ್ಯಕರ್ತ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News