×
Ad

ಮಂಗಳೂರು: ಕಂಕನಾಡಿ ಬಳಿ ಕಾರಿನಲ್ಲಿ ಮೃತದೇಹ ಪತ್ತೆ

Update: 2021-11-12 14:24 IST

ಮಂಗಳೂರು, ನ.12: ನಗರದ ಕಂಕನಾಡಿ ಬಳಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗುರುವಾರ ರಾತ್ರಿಯಿಂದಲೇ ಈ ಕಾರು ಕಂಕನಾಡಿಯಲ್ಲಿ ನಿಂತಿತ್ತು ಎಂದು ಸ್ಥಳೀಯರು‌ ಮಾಹಿತಿ ನೀಡಿದ್ದಾರೆ.

ಇಂದು ಮಧ್ಯಾಹ್ನವೂ ಈ ಕಾರು ಅನಾಥ ಸ್ಥಿತಿಯಲ್ಲಿರುವುದನ್ನು ಕಂಡ ಸಾರ್ವಜನಿಕರು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News