ಉಡುಪಿ: ‘ರಾಜ್ಯೋತ್ಸವ ಟ್ರೋಫಿ’ ಕ್ರಿಕೆಟ್-ತ್ರೋಬಾಲ್ ಪಂದ್ಯಾಟ
ಉಡುಪಿ, ನ.12: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗಾಗಿ ಕ್ರಿಕೆಟ್ ಮತ್ತು ತ್ರೋಬಾಲ್ ಪಂದ್ಯಾಟ ‘ರಾಜ್ಯೋತ್ಸವ ಟ್ರೋಫಿ’ವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಕ್ರಿಕೆಟ್ ಪಂದ್ಯಾಟದಲ್ಲಿ ಗಣಕಯಂತ್ರ ವಿಭಾಗ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್‌ಶಿಪ್ ಪಡೆಯಿತು. ಮೆಕ್ಯಾನಿಕಲ್ ಇಂಜಿನಿಯ ರಿಂಗ್ ವಿಭಾಗದ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನದೊಂದಿಗೆ ರನ್ನರ್ ಆಫ್ ಟ್ರೋಫಿ ಪಡೆಯಿತು. ವಿದ್ಯಾರ್ಥಿನಿಯರಿಗಾಗಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಗಣಕಯಂತ್ರ ಇಂಜಿನಿಯರಿಂಗ್ ವಿಭಾಗ ಅಂತಿಮ ವರ್ಷದ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಪಡೆದರೆ ಗಣಕಯಂತ್ರ ವಿಭಾಗ ತೃತೀಯ ವರ್ಷದ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನ ಪಡೆಯಿತು.
ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಸಂದೀಪ್ ಜೆ.ನಾಯಕ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಡಾ.ಗಜಾನನ ಅಣ್ಣೆ ಪಂದ್ಯಾಟಕ್ಕೆ ಚಾಲನೆ ನೀಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮುರಳೀಧರ ಶರ್ಮ, ಕ್ರೀಡಾ ಸಂಯೊಜಕ ಸಚಿನ್ ಪ್ರಭು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.