ಉಡುಪಿ: ಮಕ್ಕಳ ದಿನಾಚರಣೆ, ಚೈಲ್ಡ್‌ಲೈನ್ ಸೇ ದೋಸ್ತಿ ಸಪ್ತಾಹ

Update: 2021-11-12 14:32 GMT

ಉಡುಪಿ, ನ.12: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ, ಮಕ್ಕಳ ಸಹಾಯವಾಣಿ 1098, ಇವುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 14ರಿಂದ 20ರವರೆಗೆ ಮಕ್ಕಳ ದಿನಾಚರಣೆ ಹಾಗೂ ಚೈಲ್ಡ್‌ಲೈನ್ ಸೇ ದೋಸ್ತಿ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ನ.15ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮಕ್ಕಳು ಮತ್ತು ವಿವಿಧ ಇಲಾಖಾಧಿಕಾರಿಗಳ ನಡುವೆ ಮಕ್ಕಳ ರಕ್ಷಣೆ ಮತ್ತು ಕೋವಿಡ್ -19 ಹಾಗೂ ಆನ್‌ಲೈನ್ ತರಗತಿಯ ನಂತರ ಮರಳಿ ಶಾಲೆಗೆ ಹೊಂದಿಕೊಳ್ಳಲು ಆಗುತ್ತಿರುವ ಸಮಸ್ಯೆಯ ಕುರಿತು ಸಮಾಲೋಚನಾ ಸಭೆ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News