ದ.ಕ. ಜಿಲ್ಲೆಯಲ್ಲಿ ಶುಕ್ರವಾರ 14 ಮಂದಿಗೆ ಕೋವಿಡ್ ಪಾಸಿಟಿವ್

Update: 2021-11-12 15:53 GMT

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 14 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 11 ಮಂದಿ ಗುಣಮುಖರಾಗಿದ್ದಾರೆ. ಯಾರು ಸೋಂಕಿಗೆ ಬಲಿಯಾಗಿಲ್ಲ.

ಪಾಸಿಟಿವಿಟಿ ದರ ಶೇ.0.26 ದಾಖಲಾಗಿದೆ.1,15,647 ಸೋಂಕಿತರ ಪೈಕಿ 1,13,822 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 1,692 ಮಂದಿ ಮೃತಪಟ್ಟಿದ್ದಾರೆ. ಸದ್ಯ 133 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ 88,672 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು,1,07,60,170ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News